ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಸಭೆ ಫಲಪ್ರದ: ಮುಷ್ಕರ ವಾಪಸ್ ಪಡೆದ 108 ಆ್ಯಂಬುಲೆನ್ಸ್ ನೌಕರರ ಸಂಘ
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಸಭೆ ಫಲಪ್ರದವಾಗಿರುವ ಹಿನ್ನೆಲೆ 108 ಆ್ಯಂಬುಲೆನ್ಸ್ ನೌಕರರ ಸಂಘ ಮುಷ್ಕರ ವಾಪಸ್ ಪಡೆದಿದೆ. ಆರೋಗ್ಯ ಸಚಿವರ ಖಾದರ್ ಜೊತೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ನೌಕರರ ಬಹುತೇಕ ಬೇಡಿಕೆ ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿರುವ ಹಿನ್ನೆಲೆ ಮುಷ್ಕರ ಹಿಂಪಡೆಯಲು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ ನಿರ್ಧರಿಸಿದೆ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ನೇತೃತ್ವದಲ್ಲಿ ವಿಕಾಸಸೌಧದಲ್ಲಿ 108 ಆ್ಯಂಬುಲೆನ್ಸ್ ನೌಕರರ ಸಂಘದ ಜೊತೆ ಸಭೆ ನಡೆಸಲಾಗಿತ್ತು. ಹೊಸ ಟೆಂಡರ್ ಆಗುವ ತನಕ ಸಂಬಳ ಇಲ್ಲದೆ ನಾವು ಕೆಲಸ ಮಾಡೋಕೆ ಸಿದ್ಧರಿದ್ದೇವೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಅವರು ತಿಳಿಸಿದ್ದಾರೆ.
ಮೂಲ ವರದಿ: TV9 Kannada
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHealth Department108 AmbulanceStrikeUnion


