ಹತ್ತನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ
ನಿರಾತಂಕ ಸ್ವಯಂ ಸೇವಾ ಸಂಸ್ಥೆಯು ನವೆಂಬರ್ 21ರಂದು ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ಹತ್ತನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನದ ಭಾಗವಾಗಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ, ಮಹಿಳಾ ಸಬಲೀಕರಣ ಪ್ರಶಸ್ತಿ, ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಮಾನವ ಸಂಪನ್ಮೂಲ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಹಾಗೂ ಲೇಖನ ಕಳುಹಿಸಲು ಅಕ್ಟೋಬರ್ 10 ಕೊನೆಯ ದಿನಾಂಕ ಎಂದು ಸಂಘಟನಾ ಸಮಿತಿ ಪರವಾಗಿ ರಮೇಶ ಎಂ.ಎಚ್ ತಿಳಿಸಿದ್ದಾರೆ. ಸಂಪರ್ಕಕ್ಕೆ: 8073067542 ಅಥವಾ 9606085465, ಇ ಮೇಲ್ ವಿಳಾಸ: nirathankango@gmail.com.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHRConferenceEducation


