BLR Today
ಸೋಮವಾರ, ನವೆಂಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru1 ಗಂಟೆಗಳ ಹಿಂದೆ

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿತದಿಂದ 21 ಮಂದಿಗೆ ಕಣ್ಣಿಗೆ ಗಾಯ

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿತದಿಂದ 21 ಮಂದಿಗೆ ಕಣ್ಣಿಗೆ ಗಾಯ
ಚಿತ್ರ: Public TV

ಬೆಂಗಳೂರಿನ ವಿವಿಧ ಭಾಗಗಳಲ್ಲಿ ದೀಪಾವಳಿ ಸಂಭ್ರಮದ ವೇಳೆ ಪಟಾಕಿ ಸಿಡಿತದಿಂದ 21 ಮಂದಿಯ ಕಣ್ಣಿಗೆ ಹಾನಿಯಾಗಿದೆ. ಗಾಯಗೊಂಡವರಿಗೆ ವಿವಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದಲ್ಲಿ 9 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಒಟ್ಟು 9 ಮಂದಿಗೆ ಚಿಕಿತ್ಸೆ ನೀಡಲಾಗಿದೆ. 6 ಮಂದಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದ್ದು, ನಾಳೆ ಮತ್ತೆ ಆಸ್ಪತ್ರೆಗೆ ಬರುವಂತೆ ಸೂಚಿಸಲಾಗಿದೆ. ಉಳಿದ 3 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
DeepavaliFirecrackersEye InjuryBengaluru