BLR Today
ಶುಕ್ರವಾರ, ಅಕ್ಟೋಬರ್ 23, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಅಧಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು; ನೋ ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳೇ ಹೆಚ್ಚು

ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಅಧಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು; ನೋ ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳೇ ಹೆಚ್ಚು
ಚಿತ್ರ: Prajavani

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 9 ತಿಂಗಳಲ್ಲಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲುಗಡೆ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಸಿಗ್ನಲ್‌ ಜಂಪ್‌, ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲುಗಡೆ, ನಿರ್ಲಕ್ಷ್ಯದ ಚಾಲನೆ, ಅಡ್ಡಾದಿಡ್ಡಿ ಚಾಲನೆ, ಹೆಲ್ಮೆಟ್‌, ಸೀಟ್‌ ಬೆಲ್ಟ್‌ ಧರಿಸದಿರುವುದು, ಸಾರ್ವಜನಿಕ ಸೇವೆ ಒದಗಿಸುವ ವಾಹನ ಚಾಲಕರು ಸಮವಸ್ತ್ರ ಧರಿಸದಿರುವುದು, ವಿಮೆ ಮಾಡಿಸದಿರುವುದು, ಚಾಲನಾ ಪರವಾನಗಿ ಇಲ್ಲದಿರುವುದು, ಪಾದಚಾರಿ ಮಾರ್ಗದಲ್ಲಿ ವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruTraffic RulesViolationsBBMP