BLR Today
ಮಂಗಳವಾರ, ಅಕ್ಟೋಬರ್ 13, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ 400 ಹೆಚ್ಚುವರಿ ಬಸ್ ಸೇವೆ

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ 400 ಹೆಚ್ಚುವರಿ ಬಸ್ ಸೇವೆ
ಚಿತ್ರ: Asianet Suvarna News

ಮಹಾನವಮಿ, ಆಯುಧಪೂಜೆ ಹಾಗೂ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿವಿಧ ವಿಭಾಗಗಳಿಂದ 400 ಹೆಚ್ಚುವರಿ ವಿಶೇಷ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಮಲ್ಲೇಶ್ವರಂ, ಶಾರದಾ ಕಾಲನಿ, ಯಶವಂತಪುರ ಟಿಟಿಎಂಸಿ ಹಾಗೂ ಬಸವೇಶ್ವರನಗರ ಟಿಟಿಎಂಸಿ ನಿಲ್ದಾಣಗಳಿಂದ ಅ. 16ರಿಂದ 19ರ ವರೆಗೆ ವಿಶೇಷ ಬಸ್ ಗಳು ಸಂಚರಿಸಲಿವೆ. ಈ ಹೆಚ್ಚುವರಿ ಬಸ್ ಗಳನ್ನು ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruNWKRTCDasaraBus Service