BLR Today
ಬುಧವಾರ, ಸೆಪ್ಟೆಂಬರ್ 23, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 42 ಲಕ್ಷಕ್ಕೂ ಅಧಿಕ ಕೇಸ್​ಗಳ ಇತ್ಯರ್ಥ: 2,384 ಕೋಟಿ ರೂ ಪರಿಹಾರ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 42 ಲಕ್ಷಕ್ಕೂ ಅಧಿಕ ಕೇಸ್​ಗಳ ಇತ್ಯರ್ಥ: 2,384 ಕೋಟಿ ರೂ ಪರಿಹಾರ
ಚಿತ್ರ: TV9 Kannada

ಸೆಪ್ಟೆಂಬರ್ 19ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ಹೈಕೋರ್ಟ್, ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 42,43,624 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪ್ರಕ್ರಿಯೆಯ ಮೂಲಕ ಸಂತ್ರಸ್ತರಿಗೆ ಒಟ್ಟು 2,384 ಕೋಟಿ ರೂ ಪರಿಹಾರ ಒದಗಿಸಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾ. ಶ್ರೀಮತಿ ಅನು ಸಿ. ಶಿವರಾಮನ್ ಹಾಗೂ ನ್ಯಾ. ಆರ್. ದೇವದಾಸ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
National Lok AdalatLegalBengaluru