BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಪಟಾಕಿ ಸಿಡಿತದಿಂದ ಗಾಯಗೊಂಡ 7 ತಿಂಗಳ ಗರ್ಭಿಣಿ ಅಶ್ವಿನಿ ಚಿಕಿತ್ಸೆ ಫಲಿಸದೇ ಸಾವು

ಪಟಾಕಿ ಸಿಡಿತದಿಂದ ಗಾಯಗೊಂಡ 7 ತಿಂಗಳ ಗರ್ಭಿಣಿ ಅಶ್ವಿನಿ ಚಿಕಿತ್ಸೆ ಫಲಿಸದೇ ಸಾವು
ಚಿತ್ರ: Asianet Suvarna News

ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪಟಾಕಿ ಸಿಡಿತದಿಂದ ತೀವ್ರವಾಗಿ ಗಾಯಗೊಂಡಿದ್ದ 7 ತಿಂಗಳ ಗರ್ಭಿಣಿ ಅಶ್ವಿನಿ (33) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ ನ ಐಸಿಯುನಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಶ್ವಿನಿ ಅವರ ನಿಧನ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟುವಂತೆ ಮಾಡಿದೆ. ಪಟಾಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 33 ವರ್ಷದ ಅಶ್ವಿನಿ ಅವರ ದೇಹವು ಶೇ. 40ರಷ್ಟು ಸುಟ್ಟುಹೋಗಿತ್ತು.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruDeepavaliAccidentAshwiniVictoria Hospital