BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ವಕೀಲರ ಮೇಲಿನ ಹಲ್ಲೆ ಖಂಡಿಸಿ ಎಎಬಿಯಿಂದ ಬೃಹತ್ ಪ್ರತಿಭಟನೆ, ಕಲಾಪ ಬಹಿಷ್ಕಾರ

ವಕೀಲರ ಮೇಲಿನ ಹಲ್ಲೆ ಖಂಡಿಸಿ ಎಎಬಿಯಿಂದ ಬೃಹತ್ ಪ್ರತಿಭಟನೆ, ಕಲಾಪ ಬಹಿಷ್ಕಾರ
ಚಿತ್ರ: Prajavani

ವಕೀಲರ ಮೇಲಿನ ಹಲ್ಲೆ ಖಂಡಿಸಿ ಎಎಬಿಯಿಂದ ಬೃಹತ್ ಪ್ರತಿಭಟನೆ, ಕಲಾಪ ಬಹಿಷ್ಕಾರ

ಪೊಲೀಸ್ ಠಾಣೆಗಳು ಸಿವಿಲ್ ವ್ಯಾಜ್ಯಗಳನ್ನು ಬಗೆಹರಿಸುವ ದಂಧೆಯಲ್ಲಿ ತೊಡಗಿ ತಮ್ಮ ಅಧಿಕಾರ ಚಲಾಯಿಸುತ್ತಿರುವ ಪರಿಣಾಮ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಬೆಂಗಳೂರು ವಕೀಲರ ಸಂಘ (ಎಎಬಿ) ಆಕ್ರೋಶ ವ್ಯಕ್ತಪಡಿಸಿದೆ. ವಕೀಲರಿಗೆ ರಕ್ಷಣೆ ಇಲ್ಲವಾಗಿದ್ದು, ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ನ್ಯಾಯ ಒದಗಿಸಬೇಕು ಎಂದು ಎಎಬಿ ಆಗ್ರಹಿಸಿದೆ. ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ಮಂಗಳವಾರ (ನ.3) ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಎಎಬಿ ಕೊಟ್ಟಿದ್ದ ಕರೆಗೆ ವಕೀಲರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಹೈಕೋರ್ಟ್‌, ಸಿಟಿ ಸಿವಿಲ್ ಕೋರ್ಟ್‌, ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಹಾಗೂ ಮೆಯೊ ಹಾಲ್‌ ಕೋರ್ಟ್‌ಗಳ ವಕೀಲರು ದಿನದ ಕಲಾಪ ಬಹಿಷ್ಕರಿಸಿ ಬೀದಿಗಿಳಿದು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಬಳಿಕ ಹೈಕೋರ್ಟ್‌ನ ಗೋಲ್ಡನ್‌ ಗೇಟ್‌ ಮುಂಭಾಗ ಜಮಾಯಿಸಿ, ‘ವೃತ್ತಿನಿರತ ವಕೀಲರಿಗೆ ಸೂಕ್ತ ಭದ್ರತೆ ಮತ್ತು ಪರಿಣಾಮಕಾರಿ ಕಾನೂನು ರಕ್ಷಣೆ ಒದಗಿಸಬೇಕು’ ಎಂದು ಒಕ್ಕೊರಲ ಹಕ್ಕೊತ್ತಾಯ ಮಾಡಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruLawProtestAAB