BLR Today
ಬುಧವಾರ, ನವೆಂಬರ್ 4, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru9 ಗಂಟೆಗಳ ಹಿಂದೆ

ಆಗ್ರಹ ಅಭಿಯಾನ ಬೆಂಗಳೂರಿನಲ್ಲಿ ಮುಂದುವರಿಕೆ; ತಂಡಗಳು 120ಕ್ಕೂ ಹೆಚ್ಚು ಕಂಪನಿಗಳನ್ನು ಭೇಟಿ

ಆಗ್ರಹ ಅಭಿಯಾನ ಬೆಂಗಳೂರಿನಲ್ಲಿ ಮುಂದುವರಿಕೆ; ತಂಡಗಳು 120ಕ್ಕೂ ಹೆಚ್ಚು ಕಂಪನಿಗಳನ್ನು ಭೇಟಿ
ಚಿತ್ರ: Prajavani

ಉದ್ಯಮ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆರಂಭಿಸಿರುವ ‘ಆಗ್ರಹ ಅಭಿಯಾನ’ ಎರಡನೇ ದಿನವಾದ ಮಂಗಳವಾರವೂ ಮುಂದುವರಿಯಿತು. ವೇದಿಕೆಯ ಮಹಿಳಾ ಘಟಕ ಸೇರಿದಂತೆ ಹತ್ತಕ್ಕೂ ಹೆಚ್ಚು ತಂಡಗಳು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ 120ಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಆಗ್ರಹ ಪತ್ರ ಸಲ್ಲಿಸಿದವು. ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್, ಮಹದೇವಪುರ, ಮಾನ್ಯತಾ ಟೆಕ್ ಪಾರ್ಕ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅಭಿಯಾನ ನಡೆಯಿತು. ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಮಾತನಾಡಿ, ‘ಅಭಿಯಾನ ನವೆಂಬರ್ 30ರವರೆಗೆ ಮುಂದುವರಿಯಲಿದ್ದು, ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿರುವ ವಿವಿಧ ವಲಯಗಳ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮಾಹಿತಿ ಸಂಗ್ರಹಿಸಲಾಗುವುದು’ ಎಂದು ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKarnatakaEmploymentPolitics