BLR Today
ಬುಧವಾರ, ಅಕ್ಟೋಬರ್ 7, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನ

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನ
ಚಿತ್ರ: Prajavani

ಸಂಪಿಗೆಹಳ್ಳಿ ಪೊಲೀಸರು ರಸ್ತೆಯಲ್ಲಿ ನಡೆದು ಹೋಗುವವರನ್ನು ಗುರಿಯಾಗಿಸಿಕೊಂಡು ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿ ಮೊಹಮ್ಮದ್ ಮುಬಾರಕ್‌ (20) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ₹2 ಲಕ್ಷ ಮೌಲ್ಯದ ವಿವಿಧ ಕಂಪನಿಯ ಮೊಬೈಲ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಪಿ ನಗರದ ಒಂದನೇ ಹಂತದ ನಿವಾಸಿ ಚರಣ್‌ ಕೆ. ನಾಯ್ಡು ಅವರು ಆಗಸ್ಟ್ 10ರಂದು ರಾತ್ರಿ ಪಾಳಿ ಮುಗಿಸಿಕೊಂಡು ರಾಚೇನಹಳ್ಳಿಯ ವಸಂತಿ ಆವಂತಿ ಅಪಾರ್ಟ್‌ಮೆಂಟ್ ಎದುರು ಸ್ನೇಹಿತನೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಪಾದಚಾರಿ ಮಾರ್ಗದಲ್ಲಿ ನಡೆದು ತೆರಳುತ್ತಿದ್ದರು. ಅದೇ ವೇಳೆಯಲ್ಲಿ ಸ್ಕೂಟರ್‌ನಲ್ಲಿ ಬಂದಿದ್ದ ಆರೋಪಿ, ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದ. ಆರೋಪಿ ಯಲಹಂಕದ ಕೋಗಿಲು ಲೇಔಟ್‌ ನಿವಾಸಿ ಆಗಿದ್ದು, ನಗರದ ಹಲವು ಬಡಾವಣೆಗಳಲ್ಲಿ ಸ್ಕೂಟರ್‌ನಲ್ಲಿ ಸುತ್ತಾಡುತ್ತಾ ಪಾದಚಾರಿಗಳ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
crimeBengaluruYelahanka