BLR Today
ಶುಕ್ರವಾರ, ಅಕ್ಟೋಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru4 ಗಂಟೆಗಳ ಹಿಂದೆ

ಬೆಂಗಳೂರಿನ ಸಾರ್ವಜನಿಕ ಸೇವೆಗಳಿಗೆ 'ಭಾಷಿಣಿ' ತಂತ್ರಜ್ಞಾನದ ಬಳಕೆ

ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಮತ್ತು ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಸುಲಭಗೊಳಿಸುವ ಸಲುವಾಗಿ ವಿವಿಧ ಇಲಾಖೆಗಳಲ್ಲಿ ‘ಭಾಷಿಣಿ’ ತಂತ್ರಜ್ಞಾನ ಸಾಧನ ಅಳವಡಿಸಿಕೊಳ್ಳಲಾಗುವುದು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಪ್ರಜಾ ಸೇವಾ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯವು ವಿಕಾಸ ಸೌಧದಲ್ಲಿ ಗುರುವಾರ ಆಯೋಜಿಸಿದ್ದ ‘ಭಾಷಿಣಿ– ರಾಜ್ಯಂ’ ಎಂಬ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ‘ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಎಐ ಕೌಶಲದಲ್ಲಿ 5ನೇ ಸ್ಥಾನದಲ್ಲಿದ್ದು, ಅತ್ಯಂತ ದಕ್ಷ ಮಾನವ ಸಂಪನ್ಮೂಲವನ್ನು ಹೊಂದಿದೆ. ಭಾಷಿಣಿ ಯೋಜನೆಯನ್ನು ವೇಗವಾಗಿ ಮುನ್ನಡೆಸಲು ಕರ್ನಾಟಕ ಅತ್ಯಂತ ಸೂಕ್ತವಾದ ರಾಜ್ಯ’ ಎಂದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAIPublic ServicesTechnology