BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru7 ದಿನಗಳ ಹಿಂದೆ

ಬಿಎಐಯುಸಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಬಹಿರಂಗ ಸಭೆ ಮತ್ತು 43ನೇ ರಾಷ್ಟ್ರೀಯ ಸಮ್ಮೇಳನ ಆಯೋಜನೆ

ಬಿಎಐಯುಸಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಬಹಿರಂಗ ಸಭೆ ಮತ್ತು 43ನೇ ರಾಷ್ಟ್ರೀಯ ಸಮ್ಮೇಳನ ಆಯೋಜನೆ
ಚಿತ್ರ: Prajavani

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿನ್‌ ಕಾಂಗ್ರೆಸ್‌ (ಎಐಟಿಯುಸಿ) ವತಿಯಿಂದ ನ.22ರಿಂದ 26ವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ರ‍್ಯಾಲಿ, ಬಹಿರಂಗ ಸಭೆ ಮತ್ತು 43ನೇ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಗಿರೀಶ್ ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರು, ಮಧ್ಯಮವರ್ಗದ ಜನರ ಬದುಕಿನ ಮೇಲೆ ಗದಾ ಪ್ರಹಾರ ನಡೆಸಿವೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದರು. ಅಕ್ಕಿ ಬೆಲೆ ದಿಢೀರ್‌ ಆಗಿ ₹25– 30 ವರೆಗೆ ಹೆಚ್ಚಿಸಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
AIUCBengaluruRallyPrice HikePolitics