BLR Today
ಗುರುವಾರ, ಸೆಪ್ಟೆಂಬರ್ 24, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ಕರಿಗೌಡ ವಿರುದ್ಧ ಇಡಿಗೆ ದೂರು

ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ಕರಿಗೌಡ ವಿರುದ್ಧ ಇಡಿಗೆ ದೂರು
ಚಿತ್ರ: TV9 Kannada

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಕಂಪನಿಯ ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ ಕೇಳಿಬಂದಿದೆ. ಐಎಎಸ್ ಅಧಿಕಾರಿ ಕರಿಗೌಡ ಸೇರಿದಂತೆ ಕಸ ವಿಲೇವಾರಿ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಇಡಿಗೆ ದೂರು ಸಲ್ಲಿಕೆಯಾಗಿದೆ. ಟೆಂಡರ್, ಗುತ್ತಿಗೆ, ಭದ್ರತಾ ಠೇವಣಿ, ಕಾರ್ಯಾದೇಶದಲ್ಲಿ ನ್ಯೂನತೆ ಆರೋಪದ ಸಂಬಂಧ ವಾರದಲ್ಲಿ ವರದಿ ನೀಡುವಂತೆ ಜಿಬಿಎ ಆಯುಕ್ತರಿಗೆ ಸೂಚಿಸಲಾಗಿದೆ. ಪ್ಯಾಕೇಜ್ 2 ಮತ್ತು 5ಕ್ಕೆ ಮುನಿಯಪ್ಪ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಲಾಗಿತ್ತು. ಪ್ಯಾಕೇಜ್ 2ರ ಟೆಂಡರ್ ಮೊತ್ತ 53.4 ಕೋಟಿ ರೂಪಾಯಿ ಆದರೆ 33.63 ಕೋಟಿ ರೂಪಾಯಿಗೆ ಗುತ್ತಿಗೆ ನೀಡಲಾಗಿತ್ತು. ಪ್ಯಾಕೇಜ್ 5ರ ಟೆಂಡರ್ ಮೊತ್ತ 55.4 ಕೋಟಿ ರೂಪಾಯಿ ಆದರೆ 38.42 ಕೋಟಿ ರೂಪಾಯಿಗೆ ಟೆಂಡರ್ ನೀಡಲಾಗಿತ್ತು. ಹೀಗಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ದೊಡ್ಡ ಅಕ್ರಮ ನಡೆದಿದೆ ಎಂದು ಇಡಿಗೆ ದೂರು ಸಲ್ಲಿಕೆಯಾಗಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSolid Waste ManagementCorruptionTenderBBMP