ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ ಇಲ್ಲ: ಪರ್ಯಾಯ ಜಾಗ ಹುಡುಕಲು ಸಮೀಕ್ಷೆ
‘ಹೆಬ್ಬಾಳ- ಸಿಲ್ಕ್ ಬೋರ್ಡ್ ನಡುವೆ ಸುರಂಗ ರಸ್ತೆ’ ನಿರ್ಮಾಣಕ್ಕಾಗಿ ಲಾಲ್‌ಬಾಗ್ ಉದ್ಯಾನದಲ್ಲಿ 6 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಈ 17.5 ಕಿ.ಮೀ ಉದ್ದದ ಯೋಜನೆಗಾಗಿ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ–ಸ್ಮೈಲ್) ಪರ್ಯಾಯ ಜಾಗ ಹುಡುಕುತ್ತಿದ್ದು, ಸುರಂಗ ರಸ್ತೆಯ ಪ್ರವೇಶ ಮತ್ತು ನಿರ್ಗಮನಕ್ಕೆ ಎರಡು ಸ್ಥಳಗಳನ್ನು ಪ್ರಾಥಮಿಕ ಸಮೀಕ್ಷೆಯ ಮೂಲಕ ಗುರುತಿಸಿದೆ. ಶಾಂತಿನಗರದ ಕೆಎಸ್‌ಆರ್‌ಟಿಸಿ ಪ್ರಧಾನ ಕಚೇರಿಗೆ ಸಮೀಪದ ಜಾಗ ಮತ್ತು ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿರುವ ಖಾಲಿ ನಿವೇಶನವೆಂದು ತಿಳಿದುಬಂದಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ ಬರುವುದಿಲ್ಲ. ಪರ್ಯಾಯವಾಗಿ ಎರಡು ಅಲೈನ್‌ಮೆಂಟ್ ಸರ್ವೆ ಕಾರ್ಯ ನಡೆಯು ತ್ತಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು’ ಎಂದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruInfrastructureTrafficDevelopment


