ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
2026-27ನೇ ಸಾಲಿನ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಪರೀಕ್ಷೆಗೆ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ 30 ಕೊನೆಯ ದಿನ. ಡಿಸೆಂಬರ್ 20ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ, ಇಂಗ್ಲಿಷ್, ಉರ್ದು, ಮರಾಠಿ ಹಾಗೂ ತೆಲುಗು ಭಾಷೆಯಲ್ಲಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಬೆಂಗಳೂರು ಉತ್ತರ ಜಿಲ್ಲೆ, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-10 ಅಥವಾ ನೋಡಲ್ ಅಧಿಕಾರಿಯ ಮೊಬೈಲ್ ಸಂಖ್ಯೆ: 9972134385 ಹಾಗೂ ಬಿ.ಇ.ಓ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationScholarship


