BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಶಿಕ್ಷಣBengaluru3 ಗಂಟೆಗಳ ಹಿಂದೆ

ಹಿಂದುಳಿದ ವರ್ಗಗಳ ಪಿಎಚ್‌ಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-1(ಎ), 1(ಬಿ) ಹಾಗೂ 3(ಬಿ) ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 2026-27ನೇ ಸಾಲಿನಲ್ಲಿ ವಿಶ್ವವಿದ್ಯಾಲಯಗಳು ಅಥವಾ ಅವುಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 17 ಆಗಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationScholarship