ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
ಸುಂಕದಕಟ್ಟೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವು 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಬಿ.ಎ, ಬಿ.ಕಾಂ, ಬಿ.ಎಸ್‌ಡಬ್ಲ್ಯು, ಬಿ.ಬಿ.ಎ ಬಿಸಿಎ, ಬಿ.ಎಸ್ಸಿ (ಜನರಲ್ ಮತ್ತು ಐಟಿ), ಎಂ.ಎ. ಎ.ಕಾಂ, ಎಂ.ಎಸ್ಸಿ, ಎಂಸಿಜೆ, ಎಂಎಸ್‌ಡಬ್ಲ್ಯು, ಎಂಸಿಎ, ಎಂಬಿಎ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 13 ಕೊನೇ ದಿನ. ಆಸಕ್ತರು ವಿಶ್ವವಿದ್ಯಾಲಯದ ವೆಬ್‌ಸೈಟ್ www.ksoumysuru.ac.in ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಶಶಿಕಲಾ.ಜೆ ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
educationKarnataka State Open UniversityBengaluru


