ಸೌಜನ್ಯಾ ಪ್ರಕರಣದ ಎಸ್‌ಐಟಿಯಿಂದ ನನ್ನ ಬಿಟ್ಟುಬಿಡಿ: ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ
ಮೃತ ವಿದ್ಯಾರ್ಥಿನಿಯ ತಾಯಿಯ ಆಕ್ಷೇಪದ ಹಿನ್ನೆಲೆಯಲ್ಲಿ, ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಹೊರ ಬರಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ರಾಜ್ಯ ಸರ್ಕಾರಕ್ಕೆ ಲಿಖಿತವಾಗಿ ಮನವಿ ಮಾಡಿದ್ದಾರೆ. ಈ ಪ್ರಕರಣದ ತನಿಖೆಗೆ ಆರಂಭದಲ್ಲೇ ಆಡಚಣೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ. ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ಎಸ್ ಐಟಿ ರಚಿಸಲಾಗಿತ್ತು. ಈ ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಮತ್ತು ಡಿಐಜಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಗುಪ್ತದಳದ ಎಸ್ಪಿ ನಿಶಾ ಜೇಮ್ಸ್, ಸಿಐಡಿ ಎಸ್ಪಿ ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಸೇರಿ ನಾಲ್ವರು ಅಧಿಕಾರಿಗಳು ಸದಸ್ಯರಾಗಿದ್ದರು.
ಮೂಲ ವರದಿ: Asianet Suvarna News
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
SaujanyaSITBengaluruASP Venkatesh Prasanna


