ಬೆಂಗಳೂರಿನ ಅಥರ್ವ ನವರಂಗ ರಾಷ್ಟ್ರೀಯ ರ್ಯಾಂಕಿಂಗ್ ಟಿಟಿ ಟೂರ್ನಮೆಂಟ್‌ನಲ್ಲಿ ಕಂಚಿನ ಪದಕ ಗೆದ್ದರು
ಬೆಂಗಳೂರು: ಕರ್ನಾಟಕದ ಪ್ರತಿಭಾನ್ವಿತ ಆಟಗಾರ ಅಥರ್ವ ನವರಂಗೆ ಅವರು ಜಲಂಧರ್‌ನಲ್ಲಿ ನಡೆಯುತ್ತಿರುವ 17 ವರ್ಷದೊಳಗಿನವರ ರಾಷ್ಟ್ರೀಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಬುಧವಾರ ಕಂಚಿನ ಪದಕ ಗೆದ್ದುಕೊಂಡರು. ಅಥರ್ವ ಅವರು ಬಾಲಕರ ಸೆಮಿಫೈನಲ್ ಪಂದ್ಯದಲ್ಲಿ 11–4, 8–11, 5–11, 7–11ರಿಂದ ರಿತ್ವಿಕ್ ಎದುರು ಪರಾಭವಗೊಂಡರು. ಇದಕ್ಕೆ ಮೊದಲು ನಡೆದ ಎಂಟರ ಘಟ್ಟದ ಹಣಾಹಣಿಯಲ್ಲಿ 11-6, 11-6, 9-11, 11-8ರಿಂದ ಪೆಟ್ರೋಲಿಯಂ ಸ್ಪೋರ್ಟ್ಸ್ ಪ್ರೊಮೋಷನ್ ಬೋರ್ಡ್ (ಪಿಎಸ್‌ಪಿಬಿ) ಸಂಸ್ಥೆಯನ್ನು ಪ್ರತಿನಿಧಿಸಿದ್ದ ಧೈರ್ಯ ರಾವತ್ ವಿರುದ್ಧ ಜಯ ಸಾಧಿಸಿದ್ದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSportsTable Tennis


