BLR Today
ಬುಧವಾರ, ಸೆಪ್ಟೆಂಬರ್ 30, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru4 ಗಂಟೆಗಳ ಹಿಂದೆ

ಬೀದರ್‌ನಲ್ಲಿ ಅಂತರರಾಷ್ಟ್ರೀಯ ವ್ಯಾಪಾರ ಕಾರ್ಯಕ್ರಮ ಪ್ರಚಾರಕ್ಕೆ ಬೈಕ್ ರ‍್ಯಾಲಿ

ಬೀದರ್‌ನಲ್ಲಿ ಅಂತರರಾಷ್ಟ್ರೀಯ ವ್ಯಾಪಾರ ಕಾರ್ಯಕ್ರಮ ಪ್ರಚಾರಕ್ಕೆ ಬೈಕ್ ರ‍್ಯಾಲಿ
ಚಿತ್ರ: Prajavani

ಬೀದರ್: 24 ರಿಂದ 26ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಉದ್ಯಮ ಕಾರ್ಯಕ್ರಮದ ಪ್ರಚಾರದ ಅಂಗವಾಗಿ 2ರಂದು ನಗರದಲ್ಲಿ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ನಗರದ ಚೌಬಾರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನ– ಶ್ರೀ ಪಾಂಡುರಂಗ ಮಂದಿರ ದಿಂದ ಬೈಕ್ ರ‍್ಯಾಲಿ ಆರಂಭವಾಗಲಿದೆ. ಬೆಳಿಗ್ಗೆ 8.30ಕ್ಕೆ ಪಾಂಡುರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9ಕ್ಕೆ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಗುವುದು ಎಂದು ಆರ್ಯ ವೈಶ್ಯ ಸಂಘದ ಕಾರ್ಯದರ್ಶಿ ಚಂದ್ರಶೇಖರ ಗಾದಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರ‍್ಯಾಲಿ ಚೌಬಾರದಿಂದ ಆರಂಭಗೊಂಡು ವಿನಾಯಕ ವೃತ್ತ ಮುಖ್ಯರಸ್ತೆ, ಕ್ರಾಂತಿ ಗಣೇಶ್, ಅಂಬೇಡ್ಕರ್ ವೃತ್ತ, ಮಡಿವಾಳ ವೃತ್ತ, ನೌಬಾದ್, ಕೊಳಾರ ಕೈಗಾರಿಕಾ ಪ್ರದೇಶದ ಮಾರ್ಗವಾಗಿ ಹುಮನಾಬಾದ್‌ ತಲುಪಲಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBike RallyTrade Event