BLR Today
ಮಂಗಳವಾರ, ನವೆಂಬರ್ 10, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದ ಬಳಿ ಕಾರು ಅಪಘಾತದಲ್ಲಿ ಬೈಕ್ ಸವಾರ ಸಾವು

ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದ ಬಳಿ ಕಾರು ಅಪಘಾತದಲ್ಲಿ ಬೈಕ್ ಸವಾರ ಸಾವು
ಚಿತ್ರ: Prajavani

ಬೆಂಗಳೂರಿನ ಬಳ್ಳಾರಿ ರಸ್ತೆಯ ಹೆಬ್ಬಾಳ ಹಳೆ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾಫರ್‌ ಬೇಗ್ (30) ಎಂಬವರು ಮೃತಪಟ್ಟಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷ್ಣು ಎಂಬವರು ಜಾಫರ್‌ ಬೇಗ್ ಅವರ ಬೈಕ್‌ಗೆ ಕಾರು ಗುದ್ದಿಸಿದ್ದಾರೆ. ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಜಾಫರ್‌ ಬೇಗ್ ಅವರನ್ನು ವಿಷ್ಣು ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅತಿಯಾದ ವೇಗ ಹಾಗೂ ಕಾರು ಚಾಲಕ ವಿಷ್ಣು ಅವರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ. ಅವರನ್ನು ಬಂಧಿಸಿ ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAccidentCrime