BLR Today
ಬುಧವಾರ, ಸೆಪ್ಟೆಂಬರ್ 30, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬಿಎಂಟಿಸಿ ಬಸ್ಸುಗಳಲ್ಲಿ ಹೊಸ ಸ್ವಯಂಚಾಲಿತ ಪ್ರಯಾಣಿಕರ ಎಣಿಕೆ ವ್ಯವಸ್ಥೆ ಜಾರಿ

ಬಿಎಂಟಿಸಿ ಬಸ್ಸುಗಳಲ್ಲಿ ಹೊಸ ಸ್ವಯಂಚಾಲಿತ ಪ್ರಯಾಣಿಕರ ಎಣಿಕೆ ವ್ಯವಸ್ಥೆ ಜಾರಿ
ಚಿತ್ರ: Asianet Suvarna News

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಬಸ್ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ತಂತ್ರಜ್ಞಾನ ವ್ಯವಸ್ಥೆಯನ್ನು ಪರಿಚಯಿಸಲು ಸಿದ್ಧವಾಗಿದೆ. ಆಯ್ದ 30 ಬಸ್ಸುಗಳಲ್ಲಿ ಸ್ವಯಂಚಾಲಿತ ಪ್ರಯಾಣಿಕರ ಎಣಿಕೆ (APC) ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ಈ ವ್ಯವಸ್ಥೆಯ ಮೂಲಕ ಬಸ್ ಗಳಲ್ಲಿ ಹತ್ತುವ, ಇಳಿಯುವ ಪ್ರಯಾಣಿಕರ ಸಂಖ್ಯೆ, ಯಾವ ನಿಲ್ದಾಣದಲ್ಲಿ ಹೆಚ್ಚು ಓಡಾಟವಿದೆ ಮತ್ತು ಬಸ್‌ನಲ್ಲಿ ಯಾವ ಸಮಯದಲ್ಲಿ ಎಷ್ಟು ಜನರಿದ್ದರು ಎಂಬ ನಿಖರ ಮಾಹಿತಿ ಪಡೆಯಲು ಸಾಧ್ಯವಾಗಲಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BMTCBengaluruTransportTechnology