BLR Today
ಶನಿವಾರ, ಅಕ್ಟೋಬರ್ 10, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ವಿಜಯನಗರದಲ್ಲಿ ಪುಸ್ತಕ ಪ್ರದರ್ಶನ ಆಯೋಜನೆ

ವಿಜಯನಗರದಲ್ಲಿ ಪುಸ್ತಕ ಪ್ರದರ್ಶನ ಆಯೋಜನೆ
ಚಿತ್ರ: Prajavani

ರಾಜ್ಯ ಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರದರ್ಶನವನ್ನು ಬೆಂಗಳೂರಿನ ವಿಜಯನಗರದ ಗ್ರಂಥಾಲಯ ಸಭಾಂಗಣದಲ್ಲಿ ಅಕ್ಟೋಬರ್ 12 ರಿಂದ 14 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಏರ್ಪಡಿಸಲಾಗಿದೆ. ಈ ಪ್ರದರ್ಶನದಲ್ಲಿ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳನ್ನು ಪ್ರದರ್ಶಿಸಲಾಗುತ್ತದೆ. ಲೇಖಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 12 ರಿಂದ 22 ರಂದು ಸಂಜೆ 5:30 ರ ಒಳಗಾಗಿ ಆಯುಕ್ತರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಕಚೇರಿಯಲ್ಲಿ ಲಿಖಿತ ಮನವಿ ಸಲ್ಲಿಸಬಹುದು. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruLibraryBook Exhibition