BLR Today
ಶುಕ್ರವಾರ, ಅಕ್ಟೋಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಆರೋಗ್ಯBengaluru4 ಗಂಟೆಗಳ ಹಿಂದೆ

ಲಾಲ್‌ಬಾಗ್‌ ಮತ್ತು ಕಬ್ಬನ್ ಉದ್ಯಾನವನದಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಅಭಿಯಾನ

ಲಾಲ್‌ಬಾಗ್‌ ಮತ್ತು ಕಬ್ಬನ್ ಉದ್ಯಾನವನದಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಅಭಿಯಾನ
ಚಿತ್ರ: Prajavani

ಎಆರ್‌ಸಿ ಕ್ಯಾನ್ಸರ್‌ ಆಸ್ಪತ್ರೆಯ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಕ್ಟೋಬರ್ 10ರಂದು ಕ್ಯಾನ್ಸರ್‌ನಿಂದ ಚೇತರಿಸಿಕೊಂಡವರನ್ನು ಗೌರವಿಸಲಾಗುತ್ತದೆ. ಸೂಕ್ತ ಚಿಕಿತ್ಸೆ, ಚಿಕಿತ್ಸೆಯ ನಂತರದ ನಿರಂತರ ವೈದ್ಯಕೀಯ ತಪಾಸಣೆ ಮತ್ತು ಕಾಯಿಲೆ ವಿರುದ್ಧದ ಹೋರಾಟದ ಹಂತದಲ್ಲೂ ನಿರಂತರ ಬೆಂಬಲದ ಮಹತ್ವದ ಬಗ್ಗೆ ತಿಳಿಸಲಾಗುತ್ತದೆ. ಈ ಜಾಗೃತಿ ಅಭಿಯಾನದ ಭಾಗವಾಗಿ ಸಾರ್ವಜನಿಕರಿಗೆ ಉಚಿತ ಮ್ಯಾಮೋಗ್ರಫಿ ತಪಾಸಣೆಯ ಕೂಪನ್‌ಗಳನ್ನು ನೀಡಲಾಗುತ್ತದೆ. ಇದೇ 11 ರಂದು ಲಾಲ್‌ಬಾಗ್‌ ಉದ್ಯಾನದಲ್ಲಿ ಹಾಗೂ ಅಕ್ಟೋಬರ್ 25ರಂದು ಕಬ್ಬನ್‌ ಉದ್ಯಾನದಲ್ಲಿ ಜಾಗೃತಿ ಕಾರ್ಯಕ್ರಮಗಳ ಕರಪತ್ರಗಳ ವಿತರಣೆ, ಜಾಗೃತಿ ಫಲಕಗಳ ಪ್ರದರ್ಶನ ಹಾಗೂ ಸ್ವಯಂ ಸೇವಕರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruHealthAwarenessCancer