ಹೊತ್ತಿ ಉರಿದ ಡೀಸೆಲ್ ಟ್ಯಾಂಕರ್: ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋಮೀಟರ್ ಟ್ರಾಫಿಕ್ ಜಾಮ್
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಕನಕಪುರ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮಿದೆ. ಕನಕಪುರ ರಸ್ತೆ ಟೋಲ್ನಿಂದ ಅಂಜನಾಪುರ ಕಡೆಗೆ ಬರುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂಧಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಇದರಿಂದ ನೈಸ್ ರಸ್ತೆಯಲ್ಲಿ ಕನಿಷ್ಠ ನಾಲ್ಕು ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಮೂಲ ವರದಿ: TV9 Kannada
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruTrafficAccident


