BLR Today
ಗುರುವಾರ, ನವೆಂಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬಸ್ ಟಿಕೆಟ್ ದರ ಭಾರಿ ಹೆಚ್ಚಳ; ಬುಧವಾರ ರಾತ್ರಿಯಿಂದ ಹೊಸ ದರ ಜಾರಿಗೆ

ಬಸ್ ಟಿಕೆಟ್ ದರ ಭಾರಿ ಹೆಚ್ಚಳ; ಬುಧವಾರ ರಾತ್ರಿಯಿಂದ ಹೊಸ ದರ ಜಾರಿಗೆ
ಚಿತ್ರ: Prajavani

ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಟಿಕೆಟ್‌ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದ್ದು, ಬುಧವಾರ ರಾತ್ರಿಯಿಂದಲೇ ಹೊಸ ದರ ಜಾರಿಗೆ ಬರಲಿದೆ. ಬಿಎಂಟಿಸಿಯಲ್ಲಿ ಟಿಕೆಟ್‌ ದರವನ್ನು ಶೇ 35ರಷ್ಟು ಹಾಗೂ ಕೆಎಸ್‌ಆರ್‌ಟಿಸಿ ಸಹಿತ ಉಳಿದ ನಿಗಮಗಳಲ್ಲಿ ಶೇ 23ರಷ್ಟು ಏರಿಕೆ ಮಾಡಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್‌ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಬಿಎಂಟಿಸಿ ಸಾಮಾನ್ಯ ಬಸ್ ಪ್ರಯಾಣ ದರದಲ್ಲಿ ₹ 4ರಿಂದ ₹ 12ರವರೆಗೆ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಆರ್‌ಟಿಸಿ ಬಸ್‌ಗಳ ಪ್ರಯಾಣ ದರವನ್ನು ₹ 9ರಿಂದ 18ರವರೆಗೆ ಸ್ಟೇಜ್‌ಗಳಿಗೆ ಅನುಗುಣವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BMTCBus FareBengaluruTransport