ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 1,352 ಹುದ್ದೆಗಳಿಗೆ ನೇಮಕಕ್ಕೆ ಸಂಪುಟ ಅನುಮೋದನೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1,352 ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಇಂದು ನಡೆದ ಸಚಿವ ಸಂಪುಟದ ಸಭೆ ತೀರ್ಮಾನ ತೆಗೆದುಕೊಂಡಿತು. ಅಂಗನವಾಡಿ ಕಾರ್ಯಕರ್ತೆಯರಾಗಿ ಕನಿಷ್ಠ ಐದು ವರ್ಷ ಸೇವೆ ಸಲ್ಲಿಸಿದವರು ಪದವಿ ಪಡೆದಿದ್ದರೆ ಅವರು ಅರ್ಜಿ ಹಾಕಿಕೊಳ್ಳಲು ಅರ್ಹತೆ ಪಡೆದಿರುತ್ತಾರೆ ಎಂದು ವಾರ್ತಾ ಸಚಿವ ಎಂ. ಶಿವಣ್ಣ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAppointmentsWomen and Child Development


