ಸಿದ್ದರಾಮಯ್ಯ ವಿರುದ್ಧ 'ಸ್ಟಿಂಗ್ ಆಪರೇಷನ್' ಪ್ರಕರಣ: ತನಿಖೆಗೆ ತೆರಳಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ, JDS ಕಾರ್ಯಕರ್ತನ ಪತ್ನಿ, ಸ್ನೇಹಿತೆ ವಿರುದ್ಧ ಕೇಸ್ ದಾಖಲು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ತೆರಳಿದ್ದ ಸಿಸಿಬಿ ಮಹಿಳಾ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯ ಮೋಹನ್ ಗೌಡ ಅವರ ಪತ್ನಿ ಪವಿತ್ರಾ ಮತ್ತು ಅವರ ಸ್ನೇಹಿತೆಯ ವಿರುದ್ಧ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ರಕ್ಷಣಾ ವಿಭಾಗದ ಇನ್‌ಸ್ಪೆಕ್ಟರ್ ಕವಿತಾ ಜಿ.ಎಂ. ಅವರು ಅಕ್ಟೋಬರ್ 24ರಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeSiddaramaiahJDSCCB

