BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ದಿನಗಳ ಹಿಂದೆ

ಸಿದ್ದರಾಮಯ್ಯ ಪ್ರಕರಣದ ತನಿಖೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಧ್ವನಿ ಮಾದರಿಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ ಸಿಸಿಬಿ ಸೈಬರ್ ಪೊಲೀಸರು

ಸಿದ್ದರಾಮಯ್ಯ ಪ್ರಕರಣದ ತನಿಖೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಧ್ವನಿ ಮಾದರಿಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ ಸಿಸಿಬಿ ಸೈಬರ್ ಪೊಲೀಸರು
ಚಿತ್ರ: Prajavani

ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ವಿರುದ್ಧ ನಡೆದ ‘ಸ್ಟಿಂಗ್‌’ ಕಾರ್ಯಾಚರಣೆಯ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಸೈಬರ್ ಠಾಣೆ ಪೊಲೀಸರು, ಕಾಂಗ್ರೆಸ್‌ನ ಉಚ್ಚಾಟಿತ ನಾಯಕಿ ಕೃಪಾ ಆಳ್ವ ಅವರ ಮೊಬೈಲ್‌ ಹಾಗೂ ಧ್ವನಿ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ರವಾನೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಕೃಪಾ ಆಳ್ವ ಅವರನ್ನು ಸಿಸಿಬಿ ಪೊಲೀಸರು ಮೂರು ಬಾರಿ ವಿಚಾರಣೆ ನಡೆಸಿದ್ದರು. ಹೆಚ್ಚಿನ ಪರಿಶೀಲನೆಗಾಗಿ ಮೊಬೈಲ್‌, ಧ್ವನಿ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsCCBSiddaramaiahKripa AlwarFSL