BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ದಿನಗಳ ಹಿಂದೆ

ಕೆಪಿಎಸ್‌ಸಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರ ಮತ್ತು ಕನ್ನಾಳೆ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

ಕೆಪಿಎಸ್‌ಸಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರ ಮತ್ತು ಕನ್ನಾಳೆ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ
ಚಿತ್ರ: Public TV

ಕೆಪಿಎಸ್‌ಸಿ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ಕೇಸ್ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರ ಮತ್ತು ಕನ್ನಾಳೆ ವಿರುದ್ಧ ಇಡಿ ಅಧಿಕಾರಿಗಳು ಕೋರ್ಟ್‌ಗೆ ಸುಮಾರು 1,500 ಪುಟಗಳ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಕನ್ನಾಳೆ ಬಳಿ 1 ಕೋಟಿ 70 ಲಕ್ಷ ರೂ. ಪಡೆದಿದ್ದ ಐಎಎಸ್ ಅಧಿಕಾರಿ ಗ್ಯಾನೇಂದ್ರ, ಮನೆ ಮೇಲೆ ದಾಳಿ ನಡೆದಾಗ ಕೆಲ ದಾಖಲಾತಿ ವಶಕ್ಕೆ ಪಡೆಯಲಾಗಿದೆ. ದೋಷಾರೋಪ ಪಟ್ಟಿಯಲ್ಲಿ ಇಬ್ಬರು ಪಶುವೈಧ್ಯಾಧಿಕಾರಿ ಅಭ್ಯರ್ಥಿಗಳ ಹೆಸರು ಕೂಡ ಇದೆ. ಅಪರಾಧದಿಂದ ಬಂದ ಹಣವನ್ನು ಉಮೇಶ್ ಮತ್ತು ಓಂಕಾರ್‌ಗೆ ವರ್ಗಾಯಿಸಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCGyanendraKannaleChargesheetBengaluru