ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾಸಾಯನಿಕ ಟ್ಯಾಂಕರ್ ಸುಟ್ಟು ಕರಗಿ; 5 ಕಿ.ಮೀ. ಟ್ರಾಫಿಕ್ ಜಾಮ್
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕನಕಪುರ ರಸ್ತೆ ಟೋಲ್ನಿಂದ ಅಂಜಾನಪುರ ಕಡೆ ಬರ್ತಿದ್ದ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಟೈರ್ ಬ್ಲಾಸ್ಟ್ ಆಗಿ, ಕಾರಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ತಲಘಟ್ಟಪುರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕಳೆದ ಒಂದುವರೆ ಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ನೈಸ್ ರಸ್ತೆಯಲ್ಲಿ ಕನಿಷ್ಠ ಐದು ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯ ಅಥವಾ ಜೀವ ಹಾನಿ ಸಂಭವಿಸಿಲ್ಲ.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAccidentFireNice RoadChemical Tanker

