BLR Today
ಗುರುವಾರ, ಅಕ್ಟೋಬರ್ 8, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಶಿಕ್ಷಣBengaluru3 ಗಂಟೆಗಳ ಹಿಂದೆ

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ 34ನೇ ಘಟಿಕೋತ್ಸವಕ್ಕೆ ಸಿಜೆಐ

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ 34ನೇ ಘಟಿಕೋತ್ಸವಕ್ಕೆ ಸಿಜೆಐ
ಚಿತ್ರ: Prajavani

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ 34ನೇ ವಾರ್ಷಿಕ ಘಟಿಕೋತ್ಸವ ಇದೇ 17ರಂದು ನಡೆಯಲಿದ್ದು, ವಿ.ವಿ.ಯ ಕುಲಾಧಿಪತಿಯಾಗಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಂಗಕರ್ಮಿ ಅರುಂಧತಿ ನಾಗ್ ಘಟಿಕೋತ್ಸವ ಭಾಷಣ ಮಾಡುವರು. ಕಾನೂನು ಶಾಲೆಯ ಕುಲಪತಿ ಪ್ರೊ.ಸುಧೀರ್ ಕೃಷ್ಣಸ್ವಾಮಿ ವಾರ್ಷಿಕ ವರದಿ ವಾಚಿಸುವರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationLaw