BLR Today
ಸೋಮವಾರ, ನವೆಂಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರಿನ ನಿವಾಸಿಗಳಿಗೆ ಭೂ ಗ್ಯಾರಂಟಿ ಘೋಷಿಸಿದ ಸಿಎಂ; ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ

ಬೆಂಗಳೂರಿನ ನಿವಾಸಿಗಳಿಗೆ ಭೂ ಗ್ಯಾರಂಟಿ ಘೋಷಿಸಿದ ಸಿಎಂ; ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ
ಚಿತ್ರ: Kannada Prabha

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ನಿವಾಸಿಗಳಿಗೆ ದೀಪಾವಳಿ ಹಬ್ಬದಂದು ಭೂ ಗ್ಯಾರಂಟಿ ಘೋಷಿಸಿದ್ದಾರೆ. ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿದ್ದಾರೆ. ಬಿಡಿಎ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿದ್ದಾರೆ. 10.7.2008 ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಅಧಿಸೂಚನೆ ಹೊರಡಿಸಲಾಗಿದೆ. ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಬಿಡಿಎ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಆಸ್ತಿ ದಾಖಲೆಗಳಿಲ್ಲದ ಭೂ ಮಾಲಿಕರಿಗೆ ಭೂ ಗ್ಯಾರಂಟಿ ಸೇರಿದಂತೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCMBDAReal EstateGovernment Schemes