BLR Today
ಗುರುವಾರ, ಸೆಪ್ಟೆಂಬರ್ 24, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru3 ಗಂಟೆಗಳ ಹಿಂದೆ

ವಿಧಾನ ಪರಿಷತ್ ಚುನಾವಣೆ: ಪಕ್ಷ, ಸರ್ಕಾರ ಒಟ್ಟಾಗಿ ಕೆಲಸ- ಸಿ.ಎಂ

ವಿಧಾನ ಪರಿಷತ್ ಚುನಾವಣೆ ಯಲ್ಲಿ ಎಲ್ಲ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಆ ಕ್ಷೇತ್ರಗಳ ವ್ಯಾಪ್ತಿಯ ಪಕ್ಷದ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರ ಸಭೆ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆಯಿತು. ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, ಎಲ್ಲಾ ಸಚಿವರು ಹಾಗೂ ಶಾಸಕರು ಜವಾಬ್ದಾರಿ ವಹಿಸಿಕೊಂಡು ಚುನಾವಣೆ ಮಾಡಲಿದ್ದಾರೆ ಎಂದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsD.K. ShivakumarLegislative Council Elections