BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ದಿನಗಳ ಹಿಂದೆ

ಪಿಂಕ್ ಲೈನ್ ಮೆಟ್ರೋದಲ್ಲಿ ಡಿಕೆ ಶಿವಕುಮಾರ್ ಪ್ರಯಾಣ: ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಪ್ರಯಾಣಿಕರು

ಪಿಂಕ್ ಲೈನ್ ಮೆಟ್ರೋದಲ್ಲಿ ಡಿಕೆ ಶಿವಕುಮಾರ್ ಪ್ರಯಾಣ: ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಪ್ರಯಾಣಿಕರು
ಚಿತ್ರ: TV9 Kannada

ಇಂದು ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದಿಂದ ಸದ್ದುಗುಂಟೆ ಪಾಳ್ಯದವರೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಪಿಂಕ್ ಲೈನ್ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಅವರು ಸಹಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಬೆರೆತರು. ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋ ರೈಲು ಹತ್ತಿ ಪ್ರಯಾಣಿಸುತ್ತಿರುವುದನ್ನು ಕಂಡು ಪ್ರಯಾಣಿಕರು ಅಚ್ಚರಿ ಹಾಗೂ ಸಂತಸ ವ್ಯಕ್ತಪಡಿಸಿದರು. ಯುವಕರು, ಮಹಿಳೆಯರು ಸೇರಿದಂತೆ ಹಲವು ಪ್ರಯಾಣಿಕರು ಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿ ಬಂದು ಉಭಯಕುಶಲೋಪರಿ ವಿಚಾರಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ. ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: Kannada Prabha, Public TV
BengaluruMetroDK ShivakumarPink Line