BLR Today
ಬುಧವಾರ, ಅಕ್ಟೋಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ಗಂಟೆಗಳ ಹಿಂದೆ

ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಪಂಚಾಯಿತಿ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು, ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದರು

ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಪಂಚಾಯಿತಿ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು, ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದರು
ಚಿತ್ರ: Prajavani

ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಪಂಚಾಯಿತಿ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು, ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದರು. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಷ್‌ಬೋರ್ಡ್‌ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಸಾಮಾಜಿಕ ಜಾಲತಾಣಗಳಲ್ಲಿ ಕಾಲ ಕಾಲಕ್ಕೆ ಮಾಹಿತಿಗಳು, ಫಲಾನುಭವಿಗಳ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಈ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು. ಅನುಷ್ಠಾನ ಸಮಿತಿಯ ಸದಸ್ಯರು ಪ್ರತಿ ಫಲಾನುಭವಿಯ ಮನೆಗೆ ಭೇಟಿ ನೀಡಿ, ‘ಗ್ಯಾರಂಟಿ’ ಮನೆ ಸ್ಟಿಕರ್ ಅಂಟಿಸಬೇಕು. ಫಲಾನುಭವಿಗಳಿಗೆ ಸರ್ಕಾರ ನೀಡುವ ಅನುಕೂಲಗಳ ಕುರಿತು ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಅಭಿಪ್ರಾಯ ಹಂಚಿಕೊಳ್ಳುವ ಗ್ಯಾರಂಟಿ ಕಟ್ಟೆ ಎಂಬ ವೇದಿಕೆಯನ್ನೂ ಸೃಜಿಸಲಾಗುವುದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsScheme ImplementationCM ShivakumarGuarantee