ಪ್ರಧಾನಿ ಮೋದಿ ಬೆಂಗಳೂರು ಭೇಟಿ ಮತ್ತು ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ ಸಂದರ್ಭದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಫ್ಲೆಕ್ಸ್‌ಗಳು ಝಗಮಗ
ಬೆಂಗಳೂರು ಮೆಟ್ರೋದಲ್ಲಿ ಹೆಚ್ಚಿನ ಕೊಡುಗೆ ಯಾರದ್ದು ಎಂಬ ಕ್ರೆಡಿಟ್ ವಾರ್ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಹಾಗೂ ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಫ್ಲೆಕ್ಸ್ ವಾರ್ ಆರಂಭವಾಗಿದೆ. ಡೈರಿ ಸರ್ಕಲ್‌ನಿಂದ ಪ್ರಧಾನಿ ಮೋದಿ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದುದ್ದಕ್ಕೂ ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷದ ನಾಯಕರ ಪರವಾಗಿ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಅಳವಡಿಸಿದ್ದಾರೆ. ಪ್ರಧಾನಿ ಮೋದಿ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹಾಗೂ ಭಗವಾ ಧ್ವಜಗಳನ್ನು ಅಳವಡಿಸಿದ್ದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಮತ್ತು ಬಂಟಿಂಗ್ಸ್ ಹಾಕಿದ್ದಾರೆ. ಪ್ರಧಾನಿ ಮೋದಿ ಅವರಿಂದ ಪಿಂಕ್ ಲೈನ್ ಮೆಟ್ರೋ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಗದುದ್ದಕ್ಕೂ ಕಾಂಗ್ರೆಸ್-ಬಿಜೆಪಿ ನಾಯಕರ ಸ್ವಾಗತದ ಫ್ಲೆಕ್ಸ್‌ಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತಿವೆ.


