BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ರೈತರಿಗೆ ನಿಜವಾದ ಕಾಳಜಿ ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ... ಸಂಸದ ಸುಧಕಾರ್ ಸವಾಲು!

ರೈತರಿಗೆ ನಿಜವಾದ ಕಾಳಜಿ ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ... ಸಂಸದ ಸುಧಕಾರ್ ಸವಾಲು!
ಚಿತ್ರ: Kannada Prabha

ರೈತರಿಗೆ ಹಾಲಿನ ಖರೀದಿ ದರ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಬಡ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ. ರೈತರಿಗೆ ನ್ಯಾಯಯುತ ಬೆಲೆ ಒದಗಿಸುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 10 ಸಹಾಯ ಧನವನ್ನು ಸರ್ಕಾರವೇ ತನ್ನ ಬೊಕ್ಕಸದಿಂದ ಭರಿಸಬೇಕು ಎಂದು ಅವರು ಹೇಳಿದ್ದಾರೆ. ಈ ಹೆಚ್ಚುವರಿ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡುವುದು ಬಡ ಕುಟುಂಬಗಳು, ಹಾಲು ಅವಲಂಬಿಸಿರುವ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಸಣ್ಣ ಕಾಫಿ, ಟೀ ಅಂಗಡಿ ಮಾಲೀಕರಿಗೆ ತೊಂದರೆ ಉಂಟುಮಾಡುವುದು ಸಮಂಜಸವಲ್ಲ ಎಂದು ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
politicsagriculturemilk priceBengaluru