ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಪೊಲೀಸರ ವಿಚಾರಣೆಯಿಂದ ವಿದೇಶಕ್ಕೆ ಪರಾರಿ ಎಂಬ ಶಂಕೆ
ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದ್ದ ‘ಸ್ಟಿಂಗ್’ ಕಾರ್ಯಾಚರಣೆಯ ಪ್ರಕರಣದಲ್ಲಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರು ವಿದೇಶಕ್ಕೆ ಪರಾರಿ ಆಗಿರುವ ಶಂಕೆ ವ್ಯಕ್ತವಾಗಿದೆ. ಅ. 24ರಂದು ನಗರ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರ ಎದುರು ಅವರು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಕೃಪಾ ಆಳ್ವಾ ಅವರು, ‘ಸ್ಟಿಂಗ್ ಕಾರ್ಯಾಚರಣೆಗೂ ನನಗೂ ಸಂಬಂಧ ಇಲ್ಲ’ ಎಂದು ಹೇಳಿದ್ದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCongressKrupa AlvaPoliceInvestigation


