ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ ವಿವಾದ; ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗ ಕ್ಷಮೆಯಾಚನೆ
ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಣೆ ಪ್ರಕರಣ ಹಿನ್ನಲೆ ದೇಗುಲದ ಗೇಟ್‌ಗೆ ಬೀಗ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತರು, ದೇವಾಲಯದ ಮುಂದೆಯೇ ನಿಂತು ನಿಖಿಲ್ ಕುಮಾರಸ್ವಾಮಿ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಿಸಿ ಬೀಗ ಹಾಕಲಾಗಿತ್ತು. ಈ ವಿಚಾರ ರಾಜ್ಯಮಟ್ಟದಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅನಿಲ್, ರವಿ ಹಾಗೂ ಇತರರು ದೇಗುಲದ ಮುಂದೆ ನಿಂತು ಸ್ಪಷ್ಟನೆ ನೀಡಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: Asianet Suvarna News


