ಕಮಿಷನ್ ಕೊಟ್ಟರಷ್ಟೇ ಭೂಮಿ ಪೂಜೆಗೆ ಬರುವ MLA ಗಳು: ನವೆಂಬರ್ ಒಳಗೆ ಹಣ ಬಿಡುಗಡೆ ಮಾಡದಿದ್ದರೆ ಲಂಚ ತಿಂದ ಶಾಸಕರ ಹೆಸರು ಬಹಿರಂಗ
ನವೆಂಬರ್ ಅಂತ್ಯದೊಳಗೆ ಕಾಮಗಾರಿ ನಿರ್ವಹಿಸಿರುವ ಬಾಕಿ ಬಿಲ್‍ಗಳಿಗೆ ಹಣ ಬಿಡುಗಡೆ ಮಾಡದಿದ್ದರೆ ಡಿಸೆಂಬರ್ ನಲ್ಲಿ ಲಂಚ ಪಡೆದಿರುವ ಶಾಸಕರ ಹೆಸರನ್ನು ಬಹಿರಂಗ ಪಡಿಸಿ ಅವರನ್ನು ದೇವರ ಮುಂದೆ ಪ್ರಮಾಣ ಮಾಡುವಂತೆ ಆಹ್ವಾನಿಸುವುದಾಗಿ ರಾಜ್ಯ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಸರಕಾರದ ವಿವಿಧ ಇಲಾಖೆಗಳಿಂದ ಅಂದಾಜು 37,970 ಸಾವಿರ ಕೋಟಿ ರೂ. ಬಾಕಿ ಬಿಲ್‍ಗಳಿವೆ. ಹಾಗಾಗಿ, ನಮ್ಮ ಸಮಸ್ಯೆಗಳು ಬಗೆಹರಿಯದಿದ್ದರೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruContractorsPoliticsCorruptionBBMP


