BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ 38 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ: ಗುತ್ತಿಗೆದಾರರ ನಿಯೋಗ ಸಿಎಂ ಭೇಟಿ

ಬೆಂಗಳೂರಿನಲ್ಲಿ 38 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ: ಗುತ್ತಿಗೆದಾರರ ನಿಯೋಗ ಸಿಎಂ ಭೇಟಿ
ಚಿತ್ರ: TV9 Kannada

ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮತ್ತು ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬಾಕಿ ಇರುವ 38 ಸಾವಿರ ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿತು. ಸಭೆ ಬಳಿಕ ಮಾತನಾಡಿದ ಅಧ್ಯಕ್ಷ ಜಿ.ಮಂಜುನಾಥ್ ಅವರು, ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಹಣ ಬಾಕಿ ಕೊಡಬೇಕಿದೆ ಎಂದರು. ಸಿಎಂ ಗ್ರಾಮೀಣಾಭಿವೃದ್ಧಿ ರಸ್ತೆ ಯೋಜನೆಯಡಿ ಕಾಮಗಾರಿ ಬಿಲ್ ಬಾಕಿ ಇತ್ತು. 16 ಸಾವಿರ ಕೋಟಿ ಬಾಕಿ ಬಿಲ್ ಕ್ಲಿಯರ್ ಮಾಡುವುದಾಗಿ ಹೇಳಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ 14 ಸಾವಿರ ಕೋಟಿ ಬಿಲ್ ಬಾಕಿ ಇದೆ. ಅದನ್ನು ಸಿನಿಯಾರಿಟಿಯಡಿ ಬಿಡುಗಡೆ ಮಾಡಿ ಎಂದಿದ್ದೇವೆ ಎಂದು ತಿಳಿಸಿದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKarnatakaContractorsCM D.K. ShivakumarPaymentsInfrastructure