BLR Today
ಭಾನುವಾರ, ಅಕ್ಟೋಬರ್ 25, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆ ಕೊಂದು ಆರೋಪಿಗಳು ಪರಾರಿ

ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆ ಕೊಂದು ಆರೋಪಿಗಳು ಪರಾರಿ
ಚಿತ್ರ: Prajavani

ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ವೃದ್ಧೆ ಕೊಂದು ಆರೋಪಿಗಳು ಪರಾರಿ ಘಟನೆ ನಡೆದಿದೆ. ಹೊಸಗುಡ್ಡದಹಳ್ಳಿಯ ಟಿ ಕ್ರಾಸ್ ನಿವಾಸಿ ವೆಂಕಟಲಕ್ಷ್ಮಮ್ಮ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೆಂಕಟಲಕ್ಷ್ಮಮ್ಮ ಅವರ ಪತಿ ಹಾಗೂ ಮಗಳು ಸಹ ಮೃತಪಟ್ಟಿದ್ದು, ಇವರೊಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮಧ್ಯಾಹ್ನ ಮನೆಗೆ ಬಂದ ಇಬ್ಬರು ದುಷ್ಕರ್ಮಿಗಳು ವೆಂಕಟಲಕ್ಷ್ಮಮ್ಮ ಅವರ ತಲೆಗೆ ಹರಿತವಾದ ಆಯುಧದಿಂದ ಹೊಡೆದಿದ್ದಾರೆ. ಅಜ್ಜಿ ಮನೆಯಿಂದ ಹೊರಗೆ ಬಾರದಿರುವುದನ್ನು ತಿಳಿದು ಪಕ್ಕದ ಮನೆಯವರು ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
crimeBengaluru