ಕಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಕೆಎಎಸ್ ಅಭ್ಯರ್ಥಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಕೆಎಎಸ್ ಅಭ್ಯರ್ಥಿ ಮಮಿತಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 52ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಕೆಎಎಸ್ ಪರೀಕ್ಷೆ ಬರೆದು ಸಂದರ್ಶನ ಎದುರಿಸಿದ ಅಭ್ಯರ್ಥಿ ಮಮಿತಾ ವಿರುದ್ಧ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಸಂಪರ್ಕ ಮಾಡಿದ್ದರು. ಪರೀಕ್ಷೆಯಲ್ಲಿ ಸೆಲೆಕ್ಟ್ ಆಗಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಮಮಿತಾ ಶಾಂತ ಹೊಸಮನಿಗೆ ಹಣ ನೀಡಿದ್ದರು. ಈ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸರು ಅಭ್ಯರ್ಥಿ ಮಮಿತಾ ಹಾಗೂ ಶಾಂತ ಹೊಸಮನಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಂಧನ ಭೀತಿ ಹಿನ್ನೆಲೆ ಮಮಿತಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
KPSCKASBengaluruLegalScam


