ಮಾನಹಾನಿಕಾರ ಸುದ್ದಿ ಪ್ರಸಾರ: ಮಧ್ಯಂತರ ತಡೆ
ಮಾನಹಾನಿಕಾರ ಸುದ್ದಿ ಪ್ರಸಾರ: ಮಧ್ಯಂತರ ತಡೆ
ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಮಾನಹಾನಿ, ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. ಈ ಕುರಿತು ಸಿದ್ದರಾಮಯ್ಯ ಅವರು 18ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಧೀಶೆ ಬಿ.ಪುಷ್ಪಾಂಜಲಿ ಅವರು ಮಂಗಳವಾರ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
SiddaramaiahAICCDefamationFake NewsLegal


