BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru6 ದಿನಗಳ ಹಿಂದೆ

ಸಿಡ್ಡರಾಮಯ್ಯ 'ಸ್ಟಿಂಗ್ ಆಪರೇಷನ್' ಪ್ರಕರಣದ ಆರು ಆರೋಪಿಗಳಿಗೆ ಜಾಮೀನು ಅರ್ಜಿ ವಜಾ

ಸಿಡ್ಡರಾಮಯ್ಯ 'ಸ್ಟಿಂಗ್ ಆಪರೇಷನ್' ಪ್ರಕರಣದ ಆರು ಆರೋಪಿಗಳಿಗೆ ಜಾಮೀನು ಅರ್ಜಿ ವಜಾ
ಚಿತ್ರ: Kannada Prabha

ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಸೇರಿದಂತೆ ಆರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಕೃಪಾ ಆಳ್ವಾ, ಜೆಡಿಎಸ್ ಸೋಷಿಯಲ್ ಮೀಡಿಯಾ ಕಾರ್ಯಕರ್ತ ಪ್ರಜ್ವಲ್ ಪ್ರಸಾದ್, ಚಂದನ್ ಎಚ್‌.ಎಸ್, ಕೆವಿ ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಸೇರಿದಂತೆ 6 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಆರೋಪಿಗಳಿಗೆ ಬಂಧನ ಭೀತಿ ಎದುರಾಗಿದ್ದು, ಸಿಸಿಬಿ ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsLegalCrime