ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಸಿಜೆಪಿ ಕಾರ್ಯಕರ್ತರು ವಶ
ಬೆಂಗಳೂರಿನಲ್ಲಿ ಸಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ಅವಕಾಶ ನೀಡಿಲ್ಲ. ಹೀಗಾಗಿ ಪೊಲೀಸರ ಜೊತೆ ಸಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಸಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿ ಕಾರ್ಯಕರ್ತರು ದೆಹಲಿ ಮಾದರಿಯಲ್ಲಿ ಬ್ಯಾರಿಕೇಡ್ ಹತ್ತಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ ಸಿಜೆಪಿ ಹೋರಾಟಗಾರರು ಬ್ಯಾರಿಕೇಡ್ ಹತ್ತಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರ ಜೊತೆಗೆ ನೂಕಾಟ ತಳ್ಳಾಟ ನಡೆದಿದೆ.
ಮೂಲ ವರದಿ: Asianet Suvarna News
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCPIProtestPolice Action


