ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಜಪ್ತಿ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ಪ್ರಯಾಣಿಕ ನೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ₹4.86 ಕೋಟಿ ಮೌಲ್ಯದ 13.9 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಿದ್ದಾರೆ. ನವೆಂಬರ್ 10ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ತಡೆದುತಪಾಸಣೆ ನಡೆಸಿದಾಗ, ಮಾದಕವಸ್ತು ಪತ್ತೆಯಾಗಿದೆ. ಮಾದಕವಸ್ತು ಕಳ್ಳ ಸಾಗಣೆ ಆರೋಪದ ಮೇಲೆ ಪ್ರಯಾಣಿಕನನ್ನು ಮಾದಕವಸ್ತು ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್)–1985ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeCustomsNarcotics


