ವಿದ್ಯಾರ್ಥಿವೇತನ: ನ್ಯಾಷನಲ್ ಸ್ಕಾಲರ್ಶಿಫ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಅಂಗವಿಕಲ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2026-27ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಫ್ ಯೋಜನೆಯಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ 31ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ಶಿಫ್ ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹು. ಹೆಚ್ಚಿನ ಮಾಹಿತಿ ಗಾಗಿ ಅಂಗವಿಕಲರ ಮತ್ತು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ, ದೂರವಾಣಿ ಸಂಖ್ಯೆ 080-29752324 ಅಥವಾ ಇಮೇಲ್ dwd.ddwo@gmail.com ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruScholarshipEducation

