BLR Today
ಶುಕ್ರವಾರ, ಅಕ್ಟೋಬರ್ 2, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅಕ್ಟೋಬರ್ 5 ಕೊನೆಯ ದಿನ

ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅಕ್ಟೋಬರ್ 5 ಕೊನೆಯ ದಿನ
ಚಿತ್ರ: Prajavani

ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದ್ದಾರೆ. ಆಗಸ್ಟ್ 15 ರಿಂದ ಆರಂಭವಾಗಿರುವ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ರೈತರು ತಮ್ಮ ಮೊಬೈಲ್‌ನಲ್ಲಿ ‘ಬೆಳೆ ದರ್ಶಕ’ ಆಪ್ ಡೌನ್‌ಲೋಡ್ ಮಾಡಿಕೊಂಡು, ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
agriculturecrop surveyBengaluru